Published On: Mon, Nov 22nd, 2021

ಬಂಟ್ವಾಳದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ

ಬಂಟ್ವಾಳ:ಕನ್ನಡದ ಪ್ರಸಿದ್ಧ ಕೀರ್ತನಕಾರರಾದ ಕನಕದಾಸರು ಕರ್ನಾಟಕ ಸಂಗೀತಕ್ಕೆ ತಮ್ಮದೆ ಆದ ಕೊಡುಗೆ ನೀಡಿದ್ದಾರೆ ಸಮಾಜದ ಸಮಾನತೆಯನ್ನು ಸಾರಿದ ಇವರು ಭಕ್ತಿಯ ಮೂಲಕ ದೇವರನ್ನು ಒಲಿಸಿಕೊಳ್ಳಬಹುದು ಎಂದು ಸಾರಿದರು ಎಂದು ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಅವರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನ.22ರಂದು ಸೋಮವಾರ ನಡೆದ ಕನಕ ಜಯಂತಿ ಆಚರಣೆಯನ್ನುದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

3b5df0ad-521e-424a-82dd-0da6d9b9616b
‌ಇದೇ ಸಂದರ್ಭದಲ್ಲಿ ಕನಕದಾಸರ ಬಗ್ಗೆ ಕಂದಾಯ ನಿರೀಕ್ಷಕರಾದ ಕುಮಾರ್ ಟಿ.ಸಿ ಮಾತಾನಾಡಿ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರೆ ತಪ್ಪಾಗಲಾರದು. ಅವರು ತಮ್ಮ ಸರಳ ರಚನೆಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸವನ್ನು ಮಾಡಿದರು ಎಂದು ಹೇಳಿದರು.

79aa6795-2b9f-404f-8ff7-3ad058a7c684
ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ದಿವಾಕರ ಮುಗುಳಿಯ ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಸ್ವಾಗತಿಸಿ ವಂದಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter