Published On: Mon, Nov 22nd, 2021

ಕಳ್ಳತನ , ಸುಲಿಗೆ, ವಂಚನೆ ಸೇರಿದಂತೆ ಒಟ್ಟು 12 ಪ್ರಕರಣಗಳನ್ನು ಬೇಧಿಸಿದ ಬಂಟ್ವಾಳ ಪೋಲೀಸ್ ಠಾಣೆ

ಬಂಟ್ವಾಳ: ನಗರ ಠಾಣಾ ಪೋಲೀಸ್ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಹಾಗೂ ಎಸ್.ಐ.ನೇತ್ರತ್ವದಲ್ಲಿ ಈ ವರ್ಷದಲ್ಲಿ ಒಟ್ಟು 12 ಪ್ರಕರಣಗಳನ್ನು ಭೇಧಿಸಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ .2021 ನೇ ವರ್ಷದಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ , ಸುಲಿಗೆ, ವಂಚನೆ ಸೇರಿದಂತೆ ಒಟ್ಟು 12 ಪ್ರಕರಣಗಳನ್ನು ಬೇಧಿಸಿ ಒಟ್ಟು 17 ಲಕ್ಷದ 33 ಸಾವಿರ ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

14b7b24a-e91d-4cf7-b5e1-15098d0bbe60

ವಿವಿಧ ಪ್ರಕರಣಗಳಲ್ಲಿ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿರುವ ಪೋಲೀಸರು ನ್ಯಾಯಾಲಯದ ಅನುಮತಿ ಪಡೆದುಕೊಂಡು ಇಂದು ನ.22 ರಂದು ಸಹಾಯಕ ಪೋಲೀಸ್ ಅಧೀಕ್ಷಕ ಶಿವಾಂಷು ರಜಪೂತ್ ಐ.ಪಿ‌.ಎಸ್.ಅವರು ವಾರಸುದಾರ ರಿಗೆ ಹಸ್ತಾಂತರ ಮಾಡಿದರು.

11,3400 ರೂ ಮೌಲ್ಯದ 252.390 ಗ್ರಾಂ.ತೂಕ ದ ಚಿನ್ನಾಭರಣಗಳು, 5,49,00 ಮೌಲ್ಯದ ಬೋಲೇರೊ ಜೀಪ್, ಒಂದು ಆಲ್ಟೋ ಕಾರು, ಒಂದು ಮೋಟಾರ್ ಸೈಕಲ್, ರೂ.50000 ಮೌಲ್ಯದ ಲ್ಯಾಪ್ ಟಾಪ್ ಗಳನ್ನು ಸ್ವಾಧೀನಪಡಿಸಿಕೊಂಡು ಪ್ರಕರಣಗಳನ್ನು ಭೇಧಿಸುವಲ್ಲಿ ಯಶಸ್ವಿಯಾಗಿದ್ದರು.

ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಅವರ ನಿರ್ದೇಶನದಂತೆ , ಹೆಚ್ಚುವರಿ ಪೋಲೀಸ್ ಅಧೀಕ್ಷಕರಾದ ಡಾ! ಶಿವಕುಮಾರ್ ಗುಣಾರೆರವರ ಮಾರ್ಗದರ್ಶನ ದಲ್ಲಿ , ಬಂಟ್ವಾಳ ಎ.ಎಸ್.ಪಿ.ಶಿವಾಂಷು ರಜಪೂತ್ ಐ.ಪಿ.ಎಸ್.ನೇತ್ರತ್ವದಲ್ಲಿ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಹಾಗೂ ಬಂಟ್ವಾಳ ನಗರ ಠಾಣಾ ಎಸ್ ‌ಐ.ಅವಿನಾಶ್ ಮತ್ತು ಸಿಬ್ಬಂದಿಯ ವರು ಪಾಲ್ಗೊಂಡಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter