ನಲ್ಕೆಮಾರ್ ಸರಕಾರಿ ಪ್ರಾಥಮಿಕ ಶಾಲೆಗೆ ಶುದ್ದ ಕುಡಿಯುವ ಫಿಲ್ಟರ್ ಕೊಡುಗೆ
ಬಂಟ್ವಾಳ : ಪ್ರೆಸ್ ಕ್ಲಬ್ ಬಂಟ್ವಾಳ ಮತ್ತು ಕಾರ್ಯನಿರತ ಪತ್ರಕರ್ತರ ಸಂಘ ಬಂಟ್ವಾಳ ಇದರ ವತಿಯಿಂದ ನಲ್ಕೆಮಾರ್ ಸರಕಾರಿ ಪ್ರಾಥಮಿಕ ಶಾಲೆಗೆ ಶುದ್ದ ಕುಡಿಯುವ ಫಿಲ್ಟರನ್ನು ಸೋಮವಾರ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆಯವರು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜ್ಯೋತಿಯವರಿಗೆ ನೀಡಲಾಯಿತು.
ಈ ಸಂದರ್ಭ ಬಂಟ್ವಾಳ ಕಾರ್ಯನಿರತ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಕಾರ್ಯದರ್ಶಿ ಮೌನೇಶ ವಿಶ್ವಕರ್ಮ, ಉಪಾಧ್ಯಕ್ಷ ಯಾದವ ಅಗ್ರಬೈಲು, ಜಿಲ್ಲಾ ಸಂಘದ ಸದಸ್ಯ ಹರೀಶ್ ಮಾಂಬಾಡಿ, ಮಹಮ್ಮದ್ ಆಲಿ ಉಪಸ್ತಿತರಿದ್ದರು.