ಉಜಿರೆ: ತ್ಯಾಗ ಮತ್ತು ಸೇವೆಯ ಮೂಲಕ ಮಾಡುವ ಸತ್ಕಾರ್ಯಗಳಿಂದ ಪುಣ್ಯ ಸಂಚಯದೊಂದಿಗೆ ಶಾಂತಿ, ಸಂತೋಷ ಹಾಗೂ ನೆಮ್ಮದಿ ಸಿಗುತ್ತದೆ. ಜನರ ಪ್ರೀತಿ-ವಿಶ್ವಾಸವೇ ಧರ್ಮಸ್ಥಳದ ಅಮೂಲ್ಯ ಆಸ್ತಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.IMG_20211129_170910

ಲಕ್ಷ ದೀಪೋತ್ಸವದ ಪ್ರಥಮ ದಿನವಾದ ಕಾರ್ತಿಕ ಸೋಮವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಬಂದ ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಪಾದಯಾತ್ರಿಗಳನ್ನು ಅಮೃತವರ್ಷಿಣಿ ಸಭಾ ಭವನದಲ್ಲಿ ಉದ್ದೇಶಿಸಿ ಅವರು ಮಾತನಾಡಿದರು.IMG_20211129_171121

ಬದುಕಿನಲ್ಲಿ ಸಿಗುವ ಅನುಭವದಿಂದ ಪ್ರಗತಿ ಸಾಧ್ಯವಾಗುತ್ತದೆ.ತಾನು ಧರ್ಮಸ್ಥಳದ ವತಿಯಿಂದ ಸದಾ ಲೋಕ ಕಲ್ಯಾಣಕ್ಕಾಗಿ ಸತ್ಕಾರ್ಯಗಳನ್ನು ಮಾಡುವುದಾಗಿಅವರು ತಿಳಿಸಿದರು.IMG_20211129_183520

ಧರ್ಮದಜಾಗೃತಿ ಹಾಗೂ ಉತ್ಥಾನದೊಂದಿಗೆ ಅಧರ್ಮ, ಅನ್ಯಾಯದನಾಶವೇ ನಮ್ಮಗುರಿಯಾಗಿರಬೇಕು. ಧರ್ಮಸ್ಥಳವು ಸತ್ಯ, ಧರ್ಮ, ನ್ಯಾಯ ಮತ್ತು ನೀತಿ ಸದಾಜಾಗೃತಿಯಲ್ಲಿದ್ದು ನೆಲೆ ನಿಂತಿರುವ ಪವಿತ್ರಕ್ಷೇತ್ರವಾಗಿದೆ. ದೇಶ-ವಿದೇಶಗಳಿಂದ ಭಕ್ತರುಕ್ಷೇತ್ರದ ಬಗ್ಗೆ ಹೊಂದಿರುವಅಪಾರ ಶ್ರದ್ಧಾ-ಭಕ್ತಿ ಮತ್ತುಗೌರವವೇಇದಕ್ಕೆ ಸಾಕ್ಷಿಯಾಗಿದೆ. ಲೋಕ ಕಲ್ಯಾಣಕ್ಕಾಗಿ ಸರ್ವಜನಹಿತ ಕಾರ್ಯಗಳನ್ನು ನಿರಂತರ ತಾನು ಮುಂದುವರಿಸುವುದಾಗಿ ಅವರು ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಆರ್‌ಸೆಟಿಗಳು, ಕೆರೆಗಳಿಗೆ ಕಾಯಕಲ್ಪ, ಶುದ್ಧಕುಡಿಯುವ ನೀರಿನ ಪೂರೈಕೆ, ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನ ಇತ್ಯಾದಿ ಸೇವಾ ಕಾರ್ಯಗಳು ಸರ್ಕಾರ ಹಾಗೂ ಸರ್ವರಿಂದಲೂ ಮಾನ್ಯತೆ ಹಾಗೂ ವಿಶ್ವಾಸಾರ್ಹತೆಯನ್ನು ಪಡೆದಿವೆ ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ, ಪಾದಯಾತ್ರೆಯು ಲಕ್ಷದೀಪೋತ್ಸವದ ಅವಿಭಾಜ್ಯಅಂಗವಾಗಿದೆ.ಸಜ್ಜನ ಶಕ್ತಿ ಸಾಮೂಹಿಕವಾಗಿ ಜಾಗೃತವಾದಾಗಕ್ರಾಂತಿಕಾರಿ ಪರಿವರ್ತನೆ ಸಾಧ್ಯವಾಗುತ್ತದೆ.ಕತ್ತಲೆಯಿಂದ ಬೆಳಕಿನೆಡೆಗೆ, ಅಸತ್ಯದಿಂದ ಸತ್ಯದಕಡೆಗೆ, ಮೃತ್ಯುವಿನಿಂದಅಮೃತತ್ವದಕಡೆಗೆ ಸಾಗುವುದೇ ನಮ್ಮೆಲ್ಲರ ಉದ್ದೇಶವಾಗಿದೆ.

ಪ್ರತಿವರ್ಷವೂ ಪಾದಯಾತ್ರಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಎಲ್ಲರಿಗೂ ಸಂತೋಷ, ತೃಪ್ತಿ ಮತ್ತು ಧನ್ಯತಾಭಾವವನ್ನು ಮೂಡಿಸಿದೆ ಎಂದುಅವರು ಹೇಳಿದರು. ಹೇಮಾವತಿ ವಿ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು. ಮಾಣಿಲದ ಮೋಹನದಾಸ ಸ್ವಾಮೀಜಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್‌ಕುಮಾರ್ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್‌ ಅಧ್ಯಕ್ಷ ಶರತ್‌ಕೃಷ್ಣ ಪಡ್ವೆಟ್ನಾಯ ಇದ್ದರು.

ಬದುಕು ಕಟ್ಟೋಣತಂಡದ ಸಂಚಾಲಕ ಮೋಹನ ಕುಮಾರ್ ಸ್ವಾಗತಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್‌ ಧನ್ಯವಾದ ವಿತ್ತರು. ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.

ಹೊಸಕಟ್ಟೆ ಉತ್ಸವ : ಸೋಮವಾರ ರಾತ್ರಿ ಲಕ್ಷ ದೀಪೋತ್ಸವದ ಅಂಗವಾಗಿ ಹೊಸಕಟ್ಟೆಉತ್ಸವ ನಡೆಯಿತು. ದೇಗುಲದ ಅಂಗಣದಲ್ಲಿ ಪಲ್ಲಕ್ಕಿ ಸುತ್ತು, ಚೆಂಡೆ ಸುತ್ತು, ನಾದಸ್ವರ ಸುತ್ತು, ಸಂಗೀತ ಸುತ್ತು, ಕೊಳಲು ಸುತ್ತು, ಶಂಖ ಸುತ್ತು, ಸರ್ವವಾದ್ಯ ಸುತ್ತು ಇತ್ಯಾದಿ ಒಟ್ಟು ೧೬ ಸುತ್ತುಗಳಲ್ಲಿ ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ಭವ್ಯ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಈ ಉತ್ಸವದ ಪೂಜೆಗಳು ಒಂದೇ ರೀತಿಯಾಗಿದ್ದರೂ ಪಲ್ಲ್ಲಕ್ಕಿಗಳು ಮಾತ್ರ ಬೇರೆ ಬೇರೆ ಆಗಿರುತ್ತವೆ.

By Suddi9

Leave a Reply

Your email address will not be published. Required fields are marked *