ಮಂಗಳೂರು: ಹೊಸ ತಳಿಯ ಒಮಿಕ್ರಾನ್ ಸೋಂಕಿನ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅದನ್ನು ತಡೆಗಟ್ಟಲು ಶೀಘ್ರದಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು.

ಅವರು ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವೈರಾಣುಗಳು ರೂಪಾಂತರಿಯಾಗಿ ಬದಲಾಗುತ್ತಾ ಇರುತ್ತದೆ. ಅದಕ್ಕೆ ಮುನ್ನೆಚ್ಚರಿಕೆಯಾಗಿ ರಾಜ್ಯ ಸರ್ಕಾರ ಎಲ್ಲಾ ತಯಾರಿಯನ್ನು ಮಾಡಿಕೊಳ್ಳಬೇಕು. ಜನರನ್ನು ಗೊಂದಲ ಸೃಷ್ಠಿಸುವ ಬದಲು ಮುಂಜಾಗ್ರತೆಯನ್ನು ವಹಿಸಬೇಕು. ವ್ಯಾಕ್ಸಿನೇಶನ್ ಡ್ರೈವ್‌ನ್ನು ಶೇ.100ರಷ್ಟು ಆಗುವಂತೆ ಮಾಡಲು ಜಿಲ್ಲೆಯಲ್ಲಿ ಆಂದೋಲನ ನಡೆಸಬೇಕು. ಮೂರನೇ ಡೋಸ್ ಬೂಸ್ಟರನ್ನು ಕೊಡಲು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಕ್ರಮವನ್ನು ಕೈಗೊಳ್ಳಬೇಕು ಎಂದು ಶಾಸಕ ಖಾದರ್ ಹೇಳಿದರು.ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡ ಸದಾಶಿವ ಉಳ್ಳಾಲ್ ಮತಿತ್ತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *