ಶ್ರೀ ಕ್ಷೇತ್ರ ಬದನಡಿ: ೯ರಂದು ಷಷ್ಠಿ ಮಹೋತ್ಸವ
ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನವು ಜೀರ್ಣೋದ್ಧಾರಗೊಳ್ಳುತ್ತಿದೆ. ಬಂಟ್ವಾಳ ತಾಲ್ಲೂಕಿನಲ್ಲಿ ಸುಮಾರು ೮೦೦ ವರ್ಷಗಳ ಹಿನ್ನೆಲೆ ಹೊಂದಿರುವ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಇದೇ ೯ರಂದು ನಡೆಯಲಿದೆ.
ಅಂದು ಬೆಳಿಗ್ಗೆ ೫ ಗಂಟೆಗೆ ಉಷಾ ಪೂಜೆ, ೭ ಗಂಟೆಗೆ ಪಂಚಾಮೃತ ಮತ್ತು ಪವಮಾನ ಅಭಿಷೇಕ, ೮.೩೦ ಗಂಟೆಗೆ ಭಜನೆ ಸೇವೆ, ೯ಗಂಟೆಗೆ ಸಾಮೂಹಿಕ ಆಶ್ಲೇಷ ಬಲಿ, ಮಧ್ಯಾಹ್ನ ೧೨ ಗಂಟೆಗೆ ದೇವರ ಬಲಿ ಉತ್ಸವ ಮತ್ತು ಷಷ್ಠಿ ಮಹೋತ್ಸವ ನಡೆಯಲಿದೆ. ಮಧ್ಯಾಹ್ನ ೧ ಗಂಟೆಗೆ ಪ್ರಸಾದ ವಿತರಣೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ೬ ಗಂಟೆಗೆ ಭಜನೆ, ೭ ಗಂಟೆಗೆ ದುರ್ಗಾ ನಮಸ್ಕಾರ ಪೂಜೆ, ರಾತ್ರಿ ೭ಗಂಟೆಗೆ ಅಣ್ಣಪ್ಪ ಪಂಜುರ್ಲಿ ಸಹಿತ ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.