Published On: Wed, Dec 8th, 2021

ಹೊಕ್ಕಾಡಿಗೋಳಿ: ವೀರ -ವಿಕ್ರಮ ಕಂಬಳ ಸಮಾಪನ ಕಂಬಳ ಸಾಧಕರಿಗೆ ಸನ್ಮಾನ, ರಸ್ತೆ ವಿಸ್ತರಣೆ ಭರವಸೆ

ಬಂಟ್ವಾಳ : ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಸಭಾ ಕಾರ್ಯಕ್ರಮದಲ್ಲಿ ಚಿತ್ರ ನಿರ್ಮಾಪಕ ಅರುಣ್ ರೈ ತೋಡಾರು ಇವರನ್ನು ಅಭಿನಂದಿಸಲಾಯಿತು.7btl-Kambalaಗ್ರಾಮೀಣ ಪ್ರದೇಶದಲ್ಲಿ ಧಾರ್ಮಿಕ ನಂಬಿಕೆಯೊಂದಿಗೆ ನಡೆಯುತ್ತಿರುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಬರಲು ವೇಣೂರು-ಹೊಕ್ಕಾಡಿಗೋಳಿ ರಸ್ತೆಯನ್ನು ಚತುಷ್ಪತ ರಸ್ತೆಯನ್ನಾಗಿ ವಿಸ್ತರಿಸಲು ಅನುದಾನ ಮಂಜೂರಾಗಿದೆ. ಶೀಘ್ರವೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಬೆಳ್ತಂಗಡಿ ಶಾಸಕ ಹರೀಶ ಪೂಂಜ ಹೇಳಿದ್ದಾರೆ.

ಇಲ್ಲಿನ ಸಿದ್ಧಕಟ್ಟೆ ಸಮೀಪದ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿಯಲ್ಲಿ ಸೋಮವಾರ ಮುಕ್ತಾಯಗೊಂಡ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದೇ ವೇಳೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಓಟಗಾರ ರವಿ ಅಳದಂಗಡಿ, ದಾನಿ ಅವಿಲ್ ಮಿನೇಜಸ್, ‘ಬಿರ್ದ್ ದ ಕಂಬಳ’ ಚಲನಚಿತ್ರ ನಿರ್ಮಾಪಕ ಅರುಣ್ ರೈ ತೋಡಾರು ಮತ್ತು ಸ್ಥಳದಾನಿಗಳನ್ನು ಅಭಿನಂದಿಸಲಾಯಿತು.

ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ  ಬಂಟ್ವಾಳ, ಮಾಜಿ ಸಚಿವ ಬಿ.ರಮಾನಾಥ ರೈ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಶುಭ ಹಾರೈಸಿದರು. ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ, ಮಾಜಿ ಅಧ್ಯಕ್ಷ ಭಾಸ್ಕರ ಎಸ್.ಕೋಟ್ಯಾನ್, ಗೌರವ ಸಲಹೆಗಾರ ಗುಣಪಾಲ ಕಡಂಬ, ಕಾರ್ಯದರ್ಶಿ ರಕ್ಷಿತ್ ಜೈನ್ ನಾರಾವಿ, ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಮೂಡುಬಿದ್ರೆ, ಪುತ್ತೂರು ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಪೂಂಜ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ, ಪ್ರಮುಖರಾದ ರವಿಶಂಕರ ಶೆಟ್ಟಿ ಬಡಾಜೆಗುತ್ತು, ಕ್ಯಾಪ್ಟನ್ ಬ್ರಿಜೇಶ್ ಚೌಟ, ಎಂ.ತುಂಗಪ್ಪ ಬಂಗೇರ, ರತ್ನಕುಮಾರ್ ಚೌಟ, ನಿತ್ಯಾನಂದ ಪೂಜಾರಿ ಕೆಂತಲೆ, ರವಿ ಕಕ್ಯಪದವು, ಡಾ.ಸುದೀಪ್ ಕುಮಾರ್ ಜೈನ್, ಬೇಬಿ ಕುಂದರ್, ದೇವಪ್ಪ ಪೂಜಾರಿ, ಜಯಂತ ಕೋಟ್ಯಾನ್, ಪ್ರಭಾಕರ ಪ್ರಭು, ಸತೀಶ ಪೂಜಾರಿ, ಸುಜಾತ ಪೂಜಾರಿ, ಎಂ.ಪದ್ಮರಾಜ ಬಲ್ಲಾಳ್ ಮಾವಂತೂರು, ದುರ್ಗಾದಾಸ್ ಶೆಟ್ಟಿ ಮಾವಂತೂರು, ವಸಂತ ಕುಮಾರ್ ಅಣ್ಣಳಿಕೆ, ಮೈಕೆಲ್ ಡಿಕೋಸ್ತ, ಗೋಪಾಲ ಬಂಗೇರ ಉಳಿರೋಡಿ, ಜಗತ್ಪಾಲ ಶೆಟ್ಟಿ ಉಮನೊಟ್ಟು, ಶಾಫಿ ಮುಲಾರಪಟ್ನ, ಕಂಬಳ ಸಮಿತಿ ಗೌರವಾಧ್ಯಕ್ಷ ಗುಂಡ್ಯಾರು ಸಂಜೀವ ಶೆಟ್ಟಿ, ಪದಾಧಿಕಾರಿಗಳಾದ ಬಾಬು ರಾಜೇಂದ್ರ ಶೆಟ್ಟಿ, ಕಿರಣ್ ಕುಮಾರ್ ಮಂಜಿಲ, ಸಂದೇಶ ಶೆಟ್ಟಿ ಪೊಡುಂಬ, ಎಚ್.ಹರೀಶ ಹಿಂಗಾಣಿ, ಪುಷ್ಪರಾಜ್ ಜೈನ್, ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ರಾಜೇಶ ಶೆಟ್ಟಿ ಕೊನೆರೊಟ್ಟು, ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಜನಾರ್ಧನ ಬಂಗೇರ ತಿಮರಡ್ಕ, ಪ್ರಭಾಕರ ಎಚ್.ಹುಲಿಮೇರು ಮತ್ತಿತರರು ಇದ್ದರು.

ಕಂಬಳ ಸಮಿತಿ ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಗೌರವ ಸಲಹೆಗಾರ ಸುರೇಶ ಶೆಟ್ಟಿ ವಂದಿಸಿದರು. ಪ್ರಚಾರ ಸಮಿತಿ ಸಂಚಾಲಕ ಮೋಹನ್ ಕೆ.ಶ್ರೀಯಾನ್ ರಾಯಿ ಮತ್ತು ದಿನೇಶ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter