ಪುತ್ತೂರು: ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿ.14 ರಂದು ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಪುತ್ತೂರು ಉಪವಿಭಾಗವಾದ ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನಾದ್ಯಂತ ಡಿ.15 ರಿಂದ ಡಿ.17 ರ ಮಧ್ಯರಾತ್ರಿ ಗಂಟೆ 12 ರ ತನಕ ನಿಷೇದಾಜ್ಞೆಯನ್ನು ವಿಧಿಸಿ ಪುತ್ತೂರು ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್ ಆದೇಶ ಹೊರಡಿಸಿದ್ದಾರೆ.WhatsApp-Image-2021-12-14-at-10.33.38-PM

ಪಿಎಫ್‌ಐ ಸಂಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆಗೆ ಸಂಬಂಧಿಸಿ ಪುತ್ತೂರು ಉಪವಿಭಾಗ ವ್ಯಾಪ್ತಿಯ ಪುತ್ತೂರು ತಾಲೂಕಿನಾದ್ಯಂತ ಕಡಬ ತಾಲೂಕು ವ್ಯಾಪ್ತಿಯಾದ್ಯಂತ, ಬೆಳ್ಳಾರೆ, ಸವಣೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ತಾಲೂಕು ವ್ಯಾಪ್ತಿಯ ಹಲವಾರು ಕಾರ್ಯಕರ್ತರುಗಳು ಅಕ್ರಮ ಕೂಟ ಸೇರಿಕೊಂಡು ಜಮಾಯಿಸುವ ಮೂಲಕ ಕಾನೂನನ್ನು ಕೈಗೆತ್ತಿಕೊಳ್ಳುವ ಸನ್ನಿವೇಶ ನಿರ್ಮಾಣ ಮಾಡಿದ್ದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರುಗಳು ತಮ್ಮ ವಾಸ್ತವ್ಯದ ವ್ಯಾಪ್ತಿಯಲ್ಲಿ ಮುಂದಕ್ಕೆ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಸನ್ನಿವೇಶಗಳನ್ನು ನಿರ್ಮಾಣ ಮಾಡುವ ಸಾಧ್ಯತೆಯಿರುತ್ತದೆ. ಈ ನಿಟ್ಟಿನಲ್ಲಿ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಕೂಡಲೇ ಪುತ್ತೂರು ಉಪವಿಭಾಗ ವ್ಯಾಪ್ತಯಲ್ಲಿ ಕಲಂ 144 ಸಿ.ಆರ್ ಪಿಸಿ ರಿತ್ಯ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.WhatsApp-Image-2021-12-14-at-10.30.35-PM-135x300

By suddi9

Leave a Reply

Your email address will not be published. Required fields are marked *