ವಿಟ್ಲ: ವ್ಯವಸಾಯ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಬ್ರಹ್ಮಶ್ರೀ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷ ನರಸಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಕಾರ್ಯಕ್ರಮವನ್ನು ಸಂಘದ ಹಿರಿಯ ಸದಸ್ಯರುಗಳಾದ ಸೀತಾರಾಮ ಶೆಟ್ಟಿ ಮತ್ತು ಕೆ ಐ ಸುಬ್ರಹ್ಮಣ್ಯ ಭಟ್ ಸೇರಾಜೆಯವರು ಉದ್ಘಾಟಿಸಿದರು. ಸಂಘದ ಕಾರ್ಯದರ್ಶಿ, ಉಪಾಧ್ಯಕ್ಷ, ಎಲ್ಲಾ ನಿರ್ಧೇಶಕರು ಮತ್ತು ಸದಸ್ಯರು ಭಾಗವಹಿಸಿದ್ದರು.
