ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಕಿಜನಬೆಟ್ಟುವಿನಲ್ಲಿ ಕೂಲಿ ಕಾರ್ಮಿಕ ವ್ಯಕ್ತಿಯೋರ್ವರು ತಾನು ಕೆಲಸ ಮಾಡಿಕೊಂಡಿದ್ದ ಯಜಮಾನರ ಜಾಗದಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.WhatsApp Image 2021-12-21 at 3.49.33 PM

ಪಂಜುರ್ಲಿಗುಡ್ಡೆ ನಿವಾಸಿ ರಾಮ ಗೌಡ ಅವರ ಪುತ್ರ ಸದಾನಂದ ಗೌಡ(47) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಿಜನಬೆಟ್ಟುವಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಸದಾನಂದ ಅವರು ಅಲ್ಲಿಯೇ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಮಂಗಳವಾರ ಬೆಳಕಿಗೆ ಬಂದಿದೆ.  ಕಳೆದೆರಡು ದಿನಗಳಿಂದ ಮಾನಸಿಕವಾಗಿ ನೊಂದಿದ್ದರೆನ್ನಲಾಗಿದೆ. ಮೃತರಿಗೆ ಪತ್ನಿ, ಮೂವರು ಮಕ್ಕಳಿದ್ದಾರೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

By suddi9

Leave a Reply

Your email address will not be published. Required fields are marked *