ಕೋಲಾರ: ಮೀಟರ್ ಬಡ್ಡಿ ಹಣಕ್ಕಾಗಿ ತೊಂದರೆ ನೀಡುತ್ತಿರುವುದನ್ನು ಸಹಿಸಿಕೊಳ್ಳಲಾಗದೇ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.FotoJet-14

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅತ್ತಗಿರಿಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯನ್ನು ಹುಲಿಬೆಲೆ ಗ್ರಾಮದ ವೆಂಕಟೇಶ್ ಅವರ ಪತ್ನಿ ಲಕ್ಷ್ಮಿದೇವಮ್ಮ ಎಂದು ಹೇಳಲಾಗಿದೆ. 

ಹುಲಿಬೆಲೆ ಗ್ರಾಮದ ವೀಣಾ ವೆಂಕಟೇಶ್ ಮತ್ತಿತ್ತರರು ಬಡ್ಡಿ ಹಣಕ್ಕಾಗಿ ಸತಾಯಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ ಹಿನ್ನಲೆ ಲಕ್ಷ್ಮಿದೇವಮ್ಮ ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಹೀಗಾಗಿ ತಕ್ಷಣ ಅವರನ್ನು ಕೋಲಾರದ ಆರ್.ಎಲ್.ಮೆಡಿಕಲ್ ಜಾಲಪ್ಪ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಲಕ್ಷ್ಮಿದೇವಮ್ಮ ಬುಧವಾರ ಮೃತಪಟ್ಟಿದ್ದಾರೆ.

ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಬಡ್ಡಿ ಹಣಕ್ಕಾಗಿ ಕಿರುಕುಳ ನೀಡುತ್ತಿರುವ ಬಗ್ಗೆ ವೀಡಿಯೋ ಮಾಡಿ ತನ್ನ ನೋವನ್ನು ಹೇಳಿಕೊಂಡಿದ್ದಾರೆ. ಈ ಸಂಬಂಧ ಮೃತಳ ಸಂಬಂಧಿಕರು ಮೃತಳ ವೀಡಿಯೋ ಸಮೇತ ಗುರುವಾರ ಬೂದಿಕೋಟೆ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ಈ ಹಿನ್ನೆಲೆ ವೀಣಾ ವೆಂಕಟೇಶ್, ಅರುಣ್, ಲಕ್ಷ್ಮಿ ವಿರುದ್ಧ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *