ಮುಂಬೈ: ಭಾಂಡೂಪ್‌ನಲ್ಲಿರುವ ಬೃಹನ್‌ಮುಂಬೈ ಮುನ್ಸಿಪಲ್ (ಬಿಎಂಸಿ) ನಡೆಸುತ್ತಿರುವ ಸಾವಿತ್ರಿಬಾಯಿ ಫುಲೆ ಹೆರಿಗೆ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ನಾಲ್ಕು ನವಜಾತ ಶಿಶುಗಳು ಮೃತಪಟ್ಟಿರುವುದು ಆತಂಕ ಮೂಡಿಸಿದೆ.baby

ಕಳೆದ 4 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿರಿಸಿದ ನವಜಾತಾ ಶಿಶುಗಳು ಸಾವನ್ನಪ್ಪುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ ಎಂದು ಬಿಎಂಸಿ ಗುರುವಾರ ತಿಳಿಸಿದೆ.

ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ಈ ವಿಷಯವನ್ನು ಪ್ರಸ್ತಾಪಿಸಿದವು. ನಂತರ ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಆಸ್ಪತ್ರೆಯ ವೈದ್ಯಾಧಿಕಾರಿಯನ್ನು ಅಮಾನತು ಗೊಳಿಸಲಾಗುವುದು. ಈ ಕುರಿತು ಉನ್ನತ ಮಟ್ಟದ ತನಿಖೆಯನ್ನು ನಡೆಸುವುದಾಗಿ ತಿಳಿಸಿದರು.

By suddi9

Leave a Reply

Your email address will not be published. Required fields are marked *