ಬೆಂಗಳೂರು: ಎರಡನೇ ಸುತ್ತಿನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವಲ್ಲಿ ಬೆಂಗಳೂರು ನಗರ ಜಿಲ್ಲೆಯು ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಬಿಬಿಎಂಪಿ ಹೊರತುಪಡಿಸಿ 10,34,184 ಜನರಿಗೆ ಲಸಿಕೆ ನೀಡಿದ್ದು, ನೂರಕ್ಕೆ ನೂರರಷ್ಟು ಗುರಿ ಸಾಧಿಸಿದ ಜಿಲ್ಲೆಯಾಗಿದೆ ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಕಂದಾಯ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಯಲ್ಲಿ ಮೊದಲ ಸುತ್ತಿನಲ್ಲಿ 13,26,255 ಜನರಿಗೆ ಲಸಿಕೆ ಹಾಕಲಾಗಿದ್ದು, ಶೇ.129 ಸಾಧನೆಯಾಗಿದೆ. ಇಡೀ ರಾಜ್ಯದಲ್ಲಿ ಗುರಿ ಮೀರಿ ಸಾಧನೆಗೈದ ಏಕೈಕ ಜಿಲ್ಲೆಯಾಗಿದೆ ಎಂದರು.