ಬೆಂಗಳೂರು: ಮತಾಂತರ ನಿಯಂತ್ರಣ ಕಾಯ್ದೆಯನ್ನು ಜಾರಿಗೊಳಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳೀನ್ ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದು, ಇದಕ್ಕಾಗಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯ ಸಚಿವ ಸಂಪುಟವನ್ನು ಅಭಿನಂದಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ನಿಗದಿತ ಧರ್ಮವನ್ನು ಗುರಿಯಾಗಿಸಿ ಮಾಡಿದ ಕಾಯ್ದೆ ಇದಲ್ಲ. ಆದರೆ ಆಮಿಷ, ಉಡುಗೊರೆ, ಒತ್ತಾಯಪೂರ್ವಕವಾಗಿ ಮತಾಂತರ ಮಾಡುವುದನ್ನು ಇದು ತಡೆಯಲಿದೆ. ಈ ಕಾಯ್ದೆಯಲ್ಲಿ ಯಾವುದೇ ನಿರ್ದಿಷ್ಟ ಸಮುದಾಯದ ಬಗ್ಗೆ ಉಲ್ಲೇಖ ಇಲ್ಲ ಎಂದು ತಿಳಿಸಿದ್ದಾರೆ.

 

By suddi9

Leave a Reply

Your email address will not be published. Required fields are marked *