ಬಳ್ಳಾರಿ: ನೈಟ್ ಕರ್ಫ್ಯೂ ನಿಯಮ ಉಲ್ಲಂಘಿಸಿದರೆ ಅಂತಹವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಬಳ್ಳಾರಿ ಎಸ್ಪಿ ಸೈದುಲ್ ಅದಾವತ್ ಎಚ್ಚರಿಕೆ ನೀಡಿದ್ದಾರೆ.night-curfew-1-780x453

ಡಿಸೆಂಬರ್ 28 ರಿಂದ ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರದಲ್ಲಿ 7 ಕಡೆ ಚೆಕ್‌ಪೋಸ್ಟ್ ಹಾಕಲಾಗುವುದು. ಅನವಶ್ಯಕವಾಗಿ ಓಡಾಡುವರಿಗೆ ಮಾತ್ರ ಈ ನಿಯಮ ಅನ್ವಯಿಸಲಿದೆ. ಗೂಡ್ಸ್ ವಾಹನ, ಅಂತರ ಜಿಲ್ಲಾ ಬಸ್‌ಗಳಿಗೆ ನಿರ್ಬಂಧ ಇರುವುದಿಲ್ಲ. 10 ಗಂಟೆ ನಂತರ ಅಂಗಡಿ ತೆರೆಯಲು ಅವಕಾಶ ಇಲ್ಲ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಪಿಐಗಳ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಪ್ರತಿ ತಾಲೂಕು ಕೇಂದ್ರಗಳಲ್ಲೂ ಚೆಕ್‌ಪೋಸ್ಟ್ ಹಾಕಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

By Suddi9

Leave a Reply

Your email address will not be published. Required fields are marked *