ಮೂಡುಬಿದರೆ: ಕಾರ್ಕಳದ ಭಗವಾನ್ ಬಾಹುಬಲಿ ಸ್ವಾಮಿಗೆ 2015ರ ಜನವರಿ 21ರಿಂದ 31ರವರೆಗೆ ನಡೆಯಲಿರುವ ಮಹಾಮಸ್ತಕಾಭಿಷೇಕ ಮಹೋತ್ಸವದ ಸಮಿತಿಯ ಸಮಾಲೋಚನಾ ಸಭೆ ಮತ್ತು ಮಾಹಿತಿ ಕಾರ್ಯಕ್ರಮ ನ2ರಂದು ಬೆಳಿಗ್ಗೆ 11ಕ್ಕೆ ಮೂಡುಬಿದರೆಯ ಪದ್ಮಾವತಿ ಕಲಾ ಮಂದಿರದಲ್ಲಿ ಜರಗಲಿದೆ.

ಶ್ರೀಜೈನಮಠದ ಭಟ್ಟಾರಕ ಚಾರುಕೀತರ್ಿ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಸಮಿತಿಯ ಕಾಯರ್ಾಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ಸಮಿತಿಯ ಪ್ರಧಾನ ಕಾರ್ಯದಶರ್ಿ ಎಂ.ಕೆ.ವಿಜಯಕುಮಾರ್ , ಸಚಿವ ಕೆ.ಅಭಯಚಂದ್ರ ಜೈನ್ ಉಪಸ್ಥಿತಿಯಲ್ಲಿ ಸಮಾಲೋಚನಾ ಸಭೆ ನಡೆಯಲಿದೆ. ಮೂಡುಬಿದಿರೆ ಪರಿಸರದ ಜೈನ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸುವಂತೆ ಸಮಿತಿ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *