ಕೈಕಂಬ : ಗುರುಪುರ ಸರ್ಕಾರಿ ಪ್ರೌಢಶಾಲೆ ಮತ್ತು ಪಿಯು ಕಾಲೇಜಿನಲ್ಲಿ ಜ. ೩ರಂದು ಸೋಮವಾರ ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರವು ಪ್ರೌಢಶಾಲೆ ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ತಡೆ ಲಸಿಕೆ ಕಾರ್ಯಕ್ರಮ ಆಯೋಜಿಸಿತು.
ಈ ಸಂದರ್ಭದಲ್ಲಿ ಗುರುಪುರ ಪಂಚಾಯತ್ ಅಧ್ಯಕ್ಷ ಯಶವಂತ ಕುಮಾರ್ ಶೆಟ್ಟಿ, ಪಂಚಾಯತ್ ಕಾರ್ಯದರ್ಶಿ ಅಶೋಕ್, ಕಾಲೇಜು ಪ್ರಾಂಶುಪಾಲ ಚಂದ್ರಶೇಖರ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ರೂಪಾ ಡಿ, ಶಿಕ್ಷಕ ವೃಂದ, ಆಶಾ ಕಾರ್ಯಕರ್ತೆ, ವಿದ್ಯಾರ್ಥಿಗಳ ಪಾಲಕರು ಉಪಸ್ಥಿತರಿದ್ದರು.
