ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಒಂದನೇ ತರಗತಿಯ ಪರಿಸರ ಅಧ್ಯಯನದ ವಿಷಯಕ್ಕೆ ಸಂಬಂಧಿಸಿದಂತೆ ಸವಿರುಚಿ ಪ್ರಾತ್ಯಕ್ಷಿಕಾ ಕಾರ್ಯಕ್ರಮ ಆಯೋಜಿಸಲಾಯಿತು.
ರಾಷ್ಟ್ರ ಸೇವಿಕಾ ಸಮಿತಿಯ ದಕ್ಷಿಣ ಮಧ್ಯಕ್ಷೇತ್ರೀಯ ಕಾರ್ಯಕಾರಿಣಿ ಸಮಿತಿಯ ಸದಸ್ಯೆ ಡಾ|ಕಮಲಾ ಪ್ರಭಾಕರ್ ಭಟ್ ಮಕ್ಕಳಿಗೆ ಕಥೆಯನ್ನು ಹೇಳುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿಧ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಪ್ರಾಥಮಿಕ ಶಾಲಾ ಶೈಕ್ಷಣಿಕ ಪರೀವೀಕ್ಷಕರಾದ ಮಲ್ಲಿಕಾ ಶೆಟ್ಟಿ ಉಪಸ್ಥಿತರಿದ್ದು, ತಾವೇ ಮಕ್ಕಳಿಗೆ ತಿಂಡಿಯನ್ನು ಬಡಿಸಿ, ಅವರ ಜೊತೆಕೂತು ತಾವು ತಿಂಡಿಯನ್ನು ಸವಿದರು.
ಒಟ್ಟು ೧೫೪ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪೂರ್ವಗುರುಕುಲ ಪ್ರಮುಖರಾದ ರೂಪಕಲಾ ಎನ್ ಉಪಸ್ಥಿತರಿದ್ದರು. ಅತಿಥಿಗಳನ್ನು ಒಂದನೇ ತರಗತಿಯ ಪುಟಾಣಿಗಳು ಸ್ವಾಗತಿಸಿದರು. ಒಂದನೇತರಗತಿಯ ಮಾತಾಜಿಯವರು ಕಾರ್ಯಕ್ರಮ ನಿರ್ವಹಿಸಿದರು.
