ಬಂಟ್ವಾಳ: ತಾಲ್ಲೂಕಿನ ಸರ್ಕಾರಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಇವರಿಗೆ ಗುರುವಾರ ಮನವಿ ಸಲ್ಲಿಸಿದರು. ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು, ಶಿವಪ್ರಸಾದ್ ಶೆಟ್ಟಿ, ಸಂತೋಷ್ ಕೋಟ್ಯಾನ್ ಮತ್ತಿತರರು ಇದ್ದರು.6btl-Manaviಕೇಂದ್ರ ಸರ್ಕಾರಿ ನೌಕರರಿಗೆ ನೀಡುವಂತೆ ರಾಜ್ಯದಲ್ಲಿಯೂ ಸರ್ಕಾರಿ ನೌಕರರಿಗೆ ಸಮಾನ ವೇತನ ಮತ್ತಿತರ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿ ಸರ್ಕಾರಿ ನೌಕರರ ಸಂಘದ ನಿಯೋಗವು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರಿಗೆ ಗುರುವಾರ ಮನವಿ ಸಲ್ಲಿಸಿದೆ.

ಇಲ್ಲಿನ ಬಿ.ಸಿ.ರೋಡು ಶಾಸಕರ ಕಚೇರಿ ಎದುರು ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು ಮಾತನಾಡಿ, ದೇಶದಲ್ಲಿ ಕೆಲವೊಂದು ರಾಜ್ಯಗಳು ಮಾತ್ರ ಇಂತಹ ಸಮಾನ ವೇತನ ಸೌಲಭ್ಯ ನೀಡುತ್ತಿದೆ. ಉಳಿದಂತೆ ರಾಜ್ಯದಲ್ಲಿ ಕಂದಾಯ ಮತ್ತು ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯಲ್ಲಿ ಹಲವು ಸಮಸ್ಯೆಗಳು ಕಾಡುತ್ತಿದೆ. ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ ಶೆಟ್ಟಿ ಮಾತನಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕರ ವರ್ಗಾವಣೆ ಮತ್ತು ಬಡ್ತಿ ಸಮಸ್ಯೆ ನಿವಾರಿಸಬೇಕು ಎಂದು ಆಗ್ರಹಿಸಿದರು.

ಸಂಘದ ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್, ಪ್ರಮುರಾದ ಬಸಯ್ಯ ಆಲಿಮಟ್ಟಿ, ಉಪಾಧ್ಯಕ್ಷ ನವೀನ್ ಪಿ.ಎಸ್., ಜಯರಾಮ್, ಸೀತಾರಾಮ ಪೂಜಾರಿ, ಮಲ್ಲೇಶ್, ಯಮುನಪ್ಪ, ಇಂದುಶೇಖರ್, ಯತೀಶ್, ಪುಟ್ಟರಂಗನಾಥ್, ಕೃಷ್ಣಮೂರ್ತಿ, ರತ್ನಾವತಿ, ಮಹೇಂದ್ರ, ಸತ್ಯನಾರಾಯಣ, ವೀಣಾ ಭಾಸ್ಕರ್ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *