ಬಂಟ್ವಾಳ : ತಾಲ್ಲೂಕಿನ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಸೋಮವಾರ ನಡೆದ ಮೃತ್ಯುಂಜಯ ಹೋಮ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ರವೀಂದ್ರ ಕಂಬಳಿ, ಆರ್.ಚೆನ್ನಪ್ಪ ಕೋಟ್ಯಾನ್, ಕಮಾಲಾಕ್ಷಿ ಪೂಜಾರಿ, ಮೋನಪ್ಪ ದೇವಸ್ಯ ಮತ್ತಿತರರು ಇದ್ದರು. 
