ಬಂಟ್ವಾಳ :ತಾಲ್ಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಉಚಿತ ಕಂಪ್ಯೂಟರ್ ಹಸ್ತಾಂತರ ಕಾರ್ಯಕ್ರಮ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸದಸ್ಯೆ ಸುಲೋಚನಾ ಜಿ.ಕೆ.ಭಟ್ ಉದ್ಘಾಟಿಸಿದರು. ಕ್ಲಬ್ಬಿನ ಅಧ್ಯಕ್ಷ ರಾಘವೇಂದ್ರ ಭಟ್ ಇದ್ದಾರೆ.12btl-Vamadpdvಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿರುವ ರೋಟರಿ ಕ್ಲಬ್ ಗ್ರಾಮೀಣ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಕೈ ಜೋಡಿಸಿದೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸದಸ್ಯೆ ಸುಲೋಚನಾ ಜಿ.ಕೆ.ಭಟ್ ಹೇಳಿದ್ದಾರೆ.

ಇಲ್ಲಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಮತ್ತು ಸರ್ಕಾರದ ಕಾಗ್ನಿಜೆಂಟ್ ವತಿಯಿಂದ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಉಚಿತ ಕಂಪ್ಯೂಟರ್ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರೋಟರಿ ಕ್ಲಬ್ ಅಧ್ಯಕ್ಷ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ ಪ್ರಾಸ್ತ್ತಾವಿಕ ಮಾತನಾಡಿ, ಕೋವಿಡ್ ಸಂಕಷ್ಟದ ನಡುವೆಯೂ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ರೋಟರಿ ಕ್ಲಬ್ ಶ್ರಮಿಸುತ್ತಿದೆ ಎಂದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಹರಿಪ್ರಸಾದ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಭಾಕರ ಪ್ರಭು, ರೋಟರಿ ವಲಯ ಲೆಪ್ಟಿನೆಂಟ್ ಅವಿಲ್ ಮಿನೇಜಸ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮೋಹನದಾಸ ಗಟ್ಟಿ, ಪ್ರಮುಖರಾದ ವಾಸು ಬಂಗೇರ, ವಿನೋದ್, ಸೀತಾರಾಮ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ರಾಮಚಂದ್ರ ಶೆಟ್ಟಿಗಾರ್, ವಿಜಯ ಫೆರ್ನಾಂಡಿಸ್, ಐವನ್ ಮಿನೇಜಸ್, ಉಪನ್ಯಾಸಕ ರೊನಾಲ್ಡ್ ಕೊರೆಯಾ, ಕರುಣಾಕರ ಮತ್ತಿತರರು ಇದ್ದರು. ಉಪನ್ಯಾಸಕ ಡಾ.ರವಿ ಸ್ವಾಗತಿಸಿ, ರೋಟರಿ ಕ್ಲಬ್ ಕಾರ್ಯದರ್ಶಿ ಕೆ.ರಮೇಶ್ ನಾಯ್ಕ್ ರಾಯಿ ವಂದಿಸಿದರು. ಕೃಷ್ಣಮೂರ್ತಿ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *