Published On: Thu, Jan 13th, 2022

ಪೊಳಲಿ ಶ್ರೀ ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ

ಪೊಳಲಿ: “ವಿವೇಕಾನಂದರ ಜೀವನದಲ್ಲಿ ನಾವು ಆದರ್ಶಗಳನ್ನು ಅಳವಡಿಸಿಕೊಂಡಾಗ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ವಿವೇಕಾನಂದರನ್ನು ಕಾಣಲು ಸಾಧ್ಯ” ಎಂದು ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ಹೇಳಿದರು. ಶ್ರೀ ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣವನ್ನು ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ಅವರು ಜ.೧೨ರಂದು ಬುಧವಾರ ನೆರವೇರಿಸಿದರು. ಬೆಂಗಳೂರಿನ ಸೋಮಶೇಖರ್ ಅವರು ರಚಿಸಿದ ವಿವೇಕನಂದರ ಪ್ರತಿಮೆಯನ್ನು ರಾಷ್ಟ್ರೀಯ ಯುವ ದಿನಾಚರಣೆಯಂದು ಪೊಳಲಿ ರಾಮಕೃಷ್ಣ ತಪೋವನದ ಸ್ವಾಮೀಜಿಯವರು ಶ್ರೀ ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆಗೆ ನೀಡಿ ಅನಾವರಣಗೊಳಿಸಿದರು.12 srr2

12 srr18

ಈ ಸಂದರ್ಭದಲ್ಲಿ ಆಶ್ರಮದ ಸ್ವಾಮಿ ಜ್ಞಾನಪ್ರದಾನಂದಜಿ, ಪೊಳಲಿ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಾಧಾಕೃಷ್ಣ ಭಟ್, ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ವೆಂಕಟೇಶ್ ನಾವಡ ಪೊಳಲಿ, ಉಪಾಧ್ಯಕ್ಷ ಪರಮೇಶ್ವರ, ಯಶವಂತ ಪೊಳಲಿ, ಲೋಕೇಶ್ ಭರಣಿ, ಸುಬ್ರಾಯ ಕಾರಂತ್, ಸುಭಾಸ್ ಚಂದ್ರ, ಉಪಾಧ್ಯಾಯ ಮತ್ತು ಶಾಲಾ ಶಿಕ್ಷಕ ಶಿಕ್ಷಕಿಯರು ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.12 srr16

ವೆಂಕಟೇಶ್ ನಾವಡ ಸ್ವಾಗತಿಸಿದರು ಶಿಕ್ಷಕಿ ಪೂರ್ಣಿಮ ನಿರೂಪಿಸಿದರು. ಶಾಲಾ ಶಿಕ್ಷಕಿ ರಂಜಿತಾ ವಂದಿಸಿದರು.12 srr14

12 srr19

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter