ಬಂಟ್ವಾಳ:ತಾಲ್ಲೂಕಿನ ವಾಮದಪದವು-ಕುದ್ಕೋಳಿ ರಸ್ತೆ ನಡುವಿನ ಕುಕ್ಕಿಪಾಡಿ ಗ್ರಾಮದ ಹಲಾಯಿ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿ ಏಳು ಜನರನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ.
ಇಲ್ಲಿನ ಹಲಾಯಿ ಗುಡ್ಡ ಪ್ರದೇಶದಲ್ಲಿ ಕಳೆದ ಹಲವು ಸಮಯದಿಂದ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಎಎಸ್ಪಿ ರಾಹುಲ್ ಕುಮಾರ್ ಅವರಿಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಅವರ ಸೂಚನೆಯಂತೆ ಪುಂಜಾಲಕಟ್ಟೆ ಠಾಣಾಧಿಕಾರಿ ಲತನ್ ಕುಮಾರ್ ನೇತೃತ್ವದ ಪೊಲೀಸರು ಶುಕ್ರವಾರ ಮಧ್ಯಾಹ್ನ ದಿಢೀರ್ ದಾಳಿ ನಡೆಸಿದ್ದಾರೆ. ಇದೇ ವೇಳೆ ಬಂಧಿತರಿಂದ ಒಟ್ಟು ರೂ 6ಸಾವಿರ ನಗದು ಮತ್ತು ಐದು ಕೋಳಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *