ಕಾರ್ಕಳ: ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ ಪ್ರಥಮ ವರ್ಷದ ಭಜನಾ ಮಂಗಲೋತ್ಸವದ ಸಭಾ ಕಾರ್ಯಕ್ರಮವು ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ದೇವಸ್ಥಾನದ ಅರ್ಚಕರಾದ ಶ್ರೀನಿವಾಸ್ ಭಟ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.IMG-20220111-WA0050

ಕಾರ್ಯಕ್ರಮದ ವೇದಿಕೆಯಲ್ಲಿ ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಯೋಗೀಶ್ ಮಲ್ಯ,ಕಾರ್ಕಳ ತಾಲೂಕು ಭಜನಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀಕಾಂತ್ ಪ್ರಭು ಪಳ್ಳಿ,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕಂಟೆಬೆಟ್ಟು ಸಂಜೀವ ಪೂಜಾರಿ,ಕಡ್ತಲ ಗ್ರಾ.ಪಂ ಅಧ್ಯಕ್ಷೆ ಮಾಲತಿ ದಿನೇಶ್ ಕುಲಾಲ್,ಗ್ರಾ.ಪಂ ಸದಸ್ಯೆ ದೀಪಾ ದಿನೇಶ್ ಕಿಣಿ,ಭಜನಾ ಮಂಡಳಿಯ ಅಧ್ಯಕ್ಷೆ ದಿವ್ಯಾ ಕಾಮತ್ ಉಪಸ್ಥಿತರಿದ್ದರು.

ದೀಪಕ್ ಕಾಮತ್ ಎಳ್ಳಾರೆ ಕಾರ್ಯಕ್ರಮ ನಿರೂಪಿಸಿದರು. ಶಾಂತಿ ಪ್ರಭು ಸ್ವಾಗತಿಸಿ,ದಿವ್ಯಾ ಕಾಮತ್ ವಂದಿಸಿದರು.

By suddi9

Leave a Reply

Your email address will not be published. Required fields are marked *