ಕೈಕಂಬ : ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನ ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವರುಗಳ ನವೀಕರಣ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಪ್ರಯುಕ್ತ ಫೆ.08ರಂದು ಮಂಗಳವಾರ ಬೆಳಿಗ್ಗೆ 7 ರಿಂದ ಹೋಮ ಕಲಶಾಭಿಷೇಕ, ಮಹಾಪೂಜೆ, ಪುಣ್ಯಾಹ ಗಣಪತಿ ಹೋಮ, ಶಾಂತಿ ಪ್ರಾಯಶ್ಚಿತ್ತ ಹೋಮ, ತತ್ವಹೋಮಗಳು ನರಸಿಂಹ ಯಾಗ ಹಾಗೂ ವಿಷ್ಣುಸಹಸ್ರನಾಮ ಬ್ರಹ್ಮ ಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

