ಕೈಕಂಬ : ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನ ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವರುಗಳ ನವೀಕರಣ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಫೆ.09ರಂದು ಬುಧವಾರ ನಡೆಯಲಿದೆ. ಮಧ್ಯಾಹ್ನ 2 ರಿಂದ 4 ತನಕ ಸಂದೇಶ್ ನೀರುಮಾರ್ಗ ಮತ್ತು ಬಳಗದವರಿಂದ ಭಕ್ತಿ ರಸ ಸಂಜೆ ನಡೆಯಲಿದೆ, ಸಂಜೆ 5ರಿಂದ ಧಾರ್ಮಿಕ ಸಭೆ ನಡೆಯಲಿದೆ.
ಈ ಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಶ್ರೀ ಶ್ರೀ ವೀರೇಂದ್ರ ಹೆಗ್ಗಡೆಯವರು ಆಶಿರ್ವಚನ ನೀಡಲಿದ್ದಾರೆ. ಧಾರ್ಮಿಕ ಸಭಾ ಕಾರ್ಯಕ್ರಮದ ಬಳಿಕ ಕಲಾ ಕುಂಭ ತಂಡ ಕುಳಾಯಿ ಇವರಿಂದ ತುಳುನಡ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನಂತರ ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಲಿದೆ
