ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಕೆಲವು ದಿನಗಳ ಹಿಂದೆ ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ ನಿವೃತ್ತ ಹೆಲ್ತ್ ಇನ್ಸ್ ಪೆಕ್ಟರ್ ಸ್ಥಳೀಯ ನಿವಾಸಿ ಸುರೇಂದ್ರ ಮಯ್ಯ ಇವರು ಚಿಕಿತ್ಸೆ ಫಲಿಸದೆ ಶುಕ್ರವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.18btl-Surendra Mayya

ಮೃತರಿಗೆ ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ಇಂದಿರಾ ಸಹಿತ ಇಬ್ಬರು ಪುತ್ರರು ಇದ್ದಾರೆ. ಸುಮಾರು ೩೭ ವರ್ಷ ವಿವಿಧ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದುಡಿದು ನಿವೃತ್ತರಾಗಿದ್ದ ಇವರು ಫೆ.೬ರಂದು ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರ ಎದುರು ಸ್ಕೂಟರಿನಿಂದ ಬಿದ್ದು ಗಾಯಗೊಂಡಿದ್ದರು ಎಂದು ಸಂಚಾರಿ ಠಾಣೆ ಪೊಲೀಸರು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *