ಬಂಟ್ವಾಳ: ತಾಲ್ಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀಲಕ್ಷ್ಮಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಶನಿವಾರ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ‘ನಂಬಿಕೆ-ಆಚರಣೆಗಳು’ ಬಗ್ಗೆ ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಡಾ.ಎಂ.ಮೋಹನ ಆಳ್ವ ಉಪನ್ಯಾಸ ನೀಡಿದರು.

ಸಾವಿರಾರು ವರ್ಷಗಳ ಇತಿಹಾಸ ಮತ್ತು ಪುರಾತನ ಸಂಸ್ಕೃತಿ ಹೊಂದಿರುವ ಈ ದೇಶದಲ್ಲಿ ೩ ಸಾವಿರಕ್ಕೂ ಮಿಕ್ಕಿ ವಿವಿಧ ಜಾತಿ, ಭಾಷೆ, ಮತ ಹಾಗೂ ವಿಭಿನ್ನ ರೀತಿಯ ವೇಷ -ಭೂಷಣ ಮೂಲಕ ವಿವಿಧತೆಯಲ್ಲಿ ಏಕತೆ ಕಾಣುವ ಏಕೈಕ ರಾಷ್ಟ್ರವಾಗಿ ಗುರುತಿಸಿಕೊಂಡಿದೆ. ಸನಾತನ ಹಿಂದೂ ಧರ್ಮದಲ್ಲಿ ಎಲ್ಲರಲ್ಲೂ ದೇವರನ್ನು ಕಾಣುವ ಮೂಲಕ ಮಾನವ ಧರ್ಮವೇ ಶ್ರೇಷ್ಟ ಎಂಬುದು ಭಾರತೀಯರ ನಂಬಿಕೆಯಾಗಿದೆ ಎಂದು ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಹೇಳಿದ್ದಾರೆ.
ಇಲ್ಲಿನ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಶನಿವಾರ ನಡೆದ ‘ನಂಬಿಕೆ-ಆಚರಣೆಗಳು’ ಬಗ್ಗೆ ಅವರು ಧಾರ್ಮಿಕ ಉಪನ್ಯಾಸ ನೀಡಿದರು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ರಂಗೋಲಿ, ಗೌರವ ಸಲಹೆಗಾರ ಜನಾರ್ಧನ ಸಾಲ್ಯಾನ್ ಮುಂಡಾಜೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಕೆ. ಉಪಾಧ್ಯಾಯ, ಪ್ರಧಾನ ಕಾರ್ಯದರ್ಶಿ ದಾಮೋದರ ನೆತ್ತರಕೆರೆ, ಬ್ರಹ್ಮಕಲಶ ಸಮಿತಿ ಗೌರವಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮುಂಡಾಜೆಗುತ್ತು, ಪ್ರಧಾನ ಕಾರ್ಯದರ್ಶಿ ಗಣೇಶ ಸುವರ್ಣ ತುಂಬೆ, ಸಂಚಾಲಕ ಟಿ.ತಾರನಾಥ ಕೊಟ್ಟಾರಿ, ಕೋಶಾಧಿಕಾರಿ ಕವಿರಾಜ್ ಚಂದ್ರಿಗೆ ಮತ್ತಿತರರು ಇದ್ದರು. ಚೇತನ್ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು.
