ಬಂಟ್ವಾಳ: ಇಲ್ಲಿನ ಅಂಬೇಡ್ಕರ್ ಸಮಾಜ ಸೇವಾ ಸಂಘದ ಮತ್ತು ಮಾನವ ಬಂಧುತ್ವ ವೇದಿಕೆ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಬಿ.ಸಿ.ರೋಡು ಮಿನಿ ವಿಧಾನಸೌಧ ಎದುರು ಫೆ.೨೬ರಂದು ಸಂಜೆ ೬ ಗಂಟೆಗೆ ಎಲ್ ಇಡಿ ಪರದೆಯಲ್ಲಿ ‘ಜೈ ಭೀಮ್’ ಚಲನಚಿತ್ರ ಪ್ರದರ್ಶನ ನಡೆಯಲಿದೆ.
ಇದೇ ವೇಳೆ ನಡೆಯುವ ಸಭಾ ಕಾರ್ಯಕ್ರಮಕ್ಕೆ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಟ್ ಚಾಲನೆ ನೀಡುವರು. ಅಕ್ಷರ ಸಂತ ಹರೇಕಳ ಹಾಜಬ್ಬ ಇವರಿಗೆ ಸನ್ಮಾನ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
