ವಿಟ್ಲ : ಪಡ್ನೂರು ಗ್ರಾಮದ ಕಡಂಬು ಶ್ರೀ ವೆಂಕಟರಮಣ ಭಜನಾ ಮಂದಿರವು ಪುನರ್ ನಿರ್ಮಾನ ಗೊಳ್ಳಲಿದ್ದು ಇದರ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಭಜನಾ ಮಂದಿರದ ವಾರ್ಷಿಕೋತ್ಸವ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಶ್ಮಾಶಂಕರಿ, ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಮಾಜಿ ಅಧ್ಯಕ್ಷ ರವೀಶ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತೀಶ್ ಆಳ್ವಾ, ಕಾರ್ಯದರ್ಶಿ ರಮೇಶ್ ಕಡಂಬು, ಜಗನ್ನಾಥ ಕಾಸರಗೋಡು, ಅರವಿಂದ ರೈ, ನೋಣಯ್ಯ ಮೊದಲಾದವರು ಉಪಸ್ಥಿತರಿದ್ದರು.
