ಬಂಟ್ವಾಳ : ಕಸ್ಬಾ ಗ್ರಾಮದ ಪಣೆಕಲ ಶ್ರೀ ಮಹಮ್ಮಾಯಿ ದುರ್ಗಾಂಬಾ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ಟ್ರಸ್ಟಿನ ಸಮಾಲೋಚನಾ ಕಾರ್ಯಕ್ರಮಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಚಾಲನೆ ನೀಡಿದರು. ಮಾಣಿಲ ಮೋಹನದಾಸ ಸ್ವಾಮೀಜಿ, ಭುವನೇಶ ಪಚ್ಚಿನಡ್ಕ ಮತ್ತಿತರರು ಇದ್ದರು.27btl-Panekala
ಕಾರಣಿಕ ಪ್ರಸಿದ್ಧ ಪಣೆಕಲ ಶ್ರೀ ಮಹಮ್ಮಾಯಿ ದುರ್ಗಾಂಬಾ ದೇವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಜೀರ್ಣೋದ್ಧಾರಕ್ಕೆ ಸರ್ಕಾರದ ನೆರವು ನೀಡಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.

ಇಲ್ಲಿನ ಕಸ್ಬಾ ಗ್ರಾಮದ ಪಣೆಕಲ ಶ್ರೀ ಮಹಮ್ಮಾಯಿ ದುರ್ಗಾಂಬಾ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ಟ್ರಸ್ಟಿನ ಸಮಾಲೋಚನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ, ಭಕ್ತರ ರಾಜಕೀಯ ರಹಿತ ಪಾಲ್ಗೊಳ್ಳುವಿಕೆಯಿಂದ ಮಾತ್ರ ಧಾರ್ಮಿಕ ಕ್ಷೇತ್ರಗಳ ಪ್ರಗತಿ ತ್ವರಿತವಾಗುತ್ತದೆ ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಸನಾತನ ಹಿಂದೂ ಧರ್ಮ ಎಲ್ಲರನ್ನೂ ಪ್ರೀತಿಸಿ ಗೌರವಿಸುವ ಉನ್ನತ ಸಂಸ್ಕೃತಿ ಹೊಂದಿದೆ ಎಂದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್ ಶುಭ ಹಾರೈಸಿದರು.

ಪ್ರಮುಖರಾದ ಸುದರ್ಶನ್ ಜೈನ್, ಬೇಬಿ ಕುಂದರ್, ಪ್ರಕಾಶ ಅಂಚನ್, ಸುದರ್ಶನ್ ಬಜ, ಟ್ರಸ್ಟಿನ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಆಡಳಿತ ಸಮಿತಿ ಅಧ್ಯಕ್ಷ ಸಂಜೀವ ಮೂಲ್ಯ, ಅನುವಂಶೀಯ ಟ್ರಸ್ಟಿ ದಿನೇಶ ಪೂಜಾರಿ, ಪ್ರಧಾನ ಕಾರ್ಯದರ್ಶಿ ದೇವಪ್ಪ ಕುಲಾಲ್, ಕೋಶಾಧಿಕಾರಿ ಅಶೋಕ್ ಹೊಸ್ಮಾರ್, ಮಹಿಳಾ ಸಮಿತಿ ಅಧ್ಯಕ್ಷೆ ಲೀಲಾವತಿ ಲೋಕನಾಥ್ ಮತ್ತಿತರರು ಇದ್ದರು. ಮಹಾಬಲ ಬಂಗೇರ ಸ್ವಾಗತಿಸಿ, ಉಮೇಶ ಕುಲಾಲ್ ವಂದಿಸಿದರು. ದಿನೇಶ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *