ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆಯಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕರಾಟೆ ಪಂದ್ಯಾವಳಿ 2022ಯಲ್ಲಿ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ವಿದ್ಯಾರ್ಥಿನಿ ಸಹನಾ ಶೆಟ್ಟಿ ಪ್ರಥಮ ಸ್ಥಾನ ಮತ್ತು ಸೋನಿ ಶೆಟ್ಟಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.
ಇವರಿಗೆ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಕೂಡಿಗೆ ರಘುನಾಥ ಶೆಣೈ, ಕಾಲೇಜು ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.


