ಬಂಟ್ವಾಳ: ತಾಲ್ಲೂಕಿನ ಕಾರಣಿಕ ಪ್ರಸಿದ್ಧ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಫೆ.27ರಂದು ಭಾನುವಾರ ವಿಶೇಷ ಪಾರ್ಥನೆ ಸಲ್ಲಿಸಿದರು.27btl-Panolibailu

ಕಳೆದ ವಿಧಾನಸಭಾ ಚುನಾವಣೆ ವೇಳೆ ಭಾರೀ ಸುದ್ದಿಯಾಗಿದ್ದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಗೆ ಸಂಬಂಧಿಸಿದಂತೆ ತನ್ನ ವಿರುದ್ಧ ಮಾಡಿದ್ದ ರಾಜಕೀಯ ಪ್ರೇರಿತ ಸುಳ್ಳು ಆರೋಪ ದೂರವಾಗಿ ನೈಜತೆ ಜನತೆಗೆ ತಿಳಿಯಬೇಕು ಮಾಜಿ ಸಚಿವ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ.

ಇಲ್ಲಿನ ಕಾರಣಿಕ ಪ್ರಸಿದ್ಧ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಭಾನುವಾರ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು ಸತ್ಯ ಮತ್ತು ನೈಜತೆ ಹೊರ ಬರಬೇಕು. ಮಾತ್ರವಲ್ಲದೆ ಸುಳ್ಳು ಆರೋಪ ಮಾಡಿದವರಿಗೂ ಶಿಕ್ಷೆಯಾಗಬೇಕು ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಪದ್ಮನಾಭ ರೈ ಮತ್ತಿತರರು ಜೊತೆಗಿದ್ದರು.

ಶರತ್ ಹತ್ಯೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ನೇರ ಕಾರಣ ಎಂದು ಮೃತನ ತಂದೆ ತನಿಯಪ್ಪ ಮಡಿವಾಳ ಅವರು ಈಚೆಗೆ ಮಾಧ್ಯಮದ ಎದುರು ಮತ್ತೆ ಆರೋಪಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದನ್ನು ಇಲ್ಲಿ ಸ್ಮರಿಸಬಹುದು.

By suddi9

Leave a Reply

Your email address will not be published. Required fields are marked *