ಕೈಕಂಬ: ಮಂಗಳೂರು ತಾಲೂಕಿನ ಕುಲವೂರು ಕಡೆಗುಂಡ್ಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಕಿಲೆಂಜಾರು ಬಾರ್ದಿಲ ಶ್ರೀ ಸಾಂಬಾಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ಮಂಗಳವಾರ ಜರಗಿತು.
ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಎರಡೂ ದೇವಸ್ಥಾನಗಳಿಗೆ ಭೇಟಿ ದೇವರ ಪ್ರಸಾದ ಸ್ವೀಕರಿಸಿದರು. ದೇವಸ್ಥಾನಗಳ ಆಡಳಿತ ಮಂಡಳಿಯ ಪ್ರಮುಖರು, ಸದಸ್ಯರುಗಳು,ಅರ್ಚಕರು ಸೇವಾ ಸಮಿತಿಯ ಅಧ್ಯಕ್ಷರು, ಸದಸ್ಯರುಗಳು, ಸ್ಥಳೀಯ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.
ನೂರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ದೇವರ ಅನ್ನಪ್ರಸಾದ ಸ್ವೀಕರಿಸಿದರು. ರಾತ್ರಿ ಜಾಗರಣೆ ಪ್ರಯುಕ್ತ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.
