ಬಂಟ್ವಾಳ: ರಾಜ್ಯದಲ್ಲಿ ಹಿಜಾಬ್ ಕುರಿತಂತೆ ಹೈಕೋರ್ಟು ನೀಡಿದ ಮಧ್ಯಂತರ ತೀರ್ಪನ್ನು ಸರಿಯಾಗಿ ಅರ್ಥೈಸದೆ ರಾಜ್ಯ ಸರ್ಕಾರ ಪ್ರಕಟಿಸಿದ ಆದೇಶದಿಂದ ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯಪಾಲರು ಮಧ್ಯ ಪ್ರದೇಶಿಸಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎಸ್.ಮಹಮ್ಮದ್ ಆಗ್ರಹಿಸಿದ್ದಾರೆ.
ಬಿ.ಸಿ.ರೋಡಿನಲ್ಲಿ ಫೆ.28ರಂದು ಸೋಮವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಸಮವಸ್ತ್ರ ಕಡ್ಡಾಯ ನಿಯಮ ಇಲ್ಲದಿರುವ ಶಾಲೆಗಳಲ್ಲಿಯೂ ಈ ಸರ್ಕಾರಿ ಆದೇಶದಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸೂಕ್ತ ನಿರ್ದೇಶನ ನೀಡುವಂತೆ ಸುನ್ನಿ ಮ್ಯಾನೇಜ್‌ಮೆಂಟ್ ಅಸೋಸಿಯೇಶನ್(ಎಸ್‌ಎಂಎ) ವತಿಯಿಂದ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸುವುದಾಗಿ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘಟನೆ ದದಾಧಿಕಾರಿಗಳಾದ ಸಿ.ಎಚ್.ಅಬೂಬಕ್ಕರ್, ರಫೀಕ್ ಝಹರಿ, ಹೈದರಾಲಿ ಮಂಚಿ ಇದ್ದರು.
