ಬಂಟ್ವಾಳ: ತಾಲ್ಲೂಕಿನ ದೇವಂದಬೆಟ್ಟು ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಾನುವಾರ ಏರ್ಪಡಿಸಿದ್ದ ಸ್ವಯಂ ಸೇವಕರ ಅಭಿನಂದನಾ ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ರಂಗೋಲಿ ಮಾತನಾಡಿದರು.
ಇಲ್ಲಿನ ಮೂರು ಗ್ರಾಮಗಳಿಗೆ ಸಂಬಂಧಪಟ್ಟ ದೇವಂದಬೆಟ್ಟು ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಈಚೆಗೆ ನಡೆದ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೆ ನಿರೀಕ್ಷೆಗಿಂತಲೂ ಚೆನ್ನಾಗಿ ಮೂಡಿ ಬಂದಿದೆ. ಇಲ್ಲಿನ ಸ್ವಯಂ ಸೇವಕರ ತೊಡಗಿಸಿಕೊಳ್ಳುವಿಕೆ ಇತರ ಕಡೆಗಳಿಗೆ ಮಾದರಿಯಾಗಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಉಪಾಧ್ಯಾಯ ಹೇಳಿದ್ದಾರೆ. ತಾಲ್ಲೂಕಿನ ದೇವಂದಬೆಟ್ಟು ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಾನುವಾರ ಏರ್ಪಡಿಸಿದ್ದ ಸ್ವಯಂ ಸೇವಕರ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ರಂಗೋಲಿ, ಪ್ರಧಾನ ಕಾರ್ಯದರ್ಶಿ ಗಣೇಶ ಸುವರ್ಣ, ಗೌರವಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮುಂಡಾಜೆಗುತ್ತು, ಸಂಚಾಲಕ ತೇವು ತಾರಾನಾಥ ಕೊಟ್ಟಾರಿ, ಶಿವರಾಮ ಶಿಬರಾಯ ಶುಭ ಹಾರೈಸಿದರು.
ಕೋಶಾಧಿಕಾರಿ ಕವಿರಾಜ್ ಚಂದ್ರಿಗೆ ಲೆಕ್ಕಪತ್ರ ಮಂಡಿಸಿದರು. ಅರ್ಚಕ ರಾಧಾಕೃಷ್ಣ ಕಡಂಬಳಿತ್ತಾಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸತೀಶ್ ಶೆಟ್ಟಿ ಮೊಡಂಕಾಪು, ದಿವಾಕರ ಶೆಟ್ಟಿ ಕುಪ್ಪಿಲ, ಪುರುಷೋತ್ತಮ ಕೊಟ್ಟಾರಿ ಮಾಡಂಗೆ, ಅಮಿತಾ ವಿಶ್ವನಾಥ್ ದಾಸರಕೋಡಿ, ಉಮಾ ಲಿಂಗಪ್ಪ ತುಂಬೆ, ಪ್ರಮುಖರಾದ ಜನಾರ್ದನ ಸಾಲ್ಯಾನ್ ಮುಂಡಾಜೆ, ಜ್ಯೋತಿಂದ್ರ ಶೆಟ್ಟಿ ಮುಂಡಾಜೆಗುತ್ತು, ನಾರಾಯಣ ಹೊಳ್ಳ ಹೊಳ್ಳರಬೈಲು, ರಾಮಕೃಷ್ಣ ಆಳ್ವ ಪೊನ್ನೋಡಿ, ದೇವಿಪ್ರಸಾದ್ ಎಂ. ದೇವಂದಬೆಟ್ಟು, ರಾಘವೇಂದ್ರ ಕಾರಂತ ಕನಪಾಡಿ, ಸೋಮಪ್ಪ ಕೋಟ್ಯಾನ್ ತುಂಬೆ, ಪದ್ಮನಾಭ ರಾವ್ ಕನಪಾಡಿ, ಓಮಯ್ಯ ಜೆ. ಕೋಟ್ಯಾನ್ ಮೇಗಿನಮನೆ, ದಿವಾಕರ ಪಂಬದಬೆಟ್ಟು, ಮನೋಜ್ ವಳವೂರು, ಮಾಧವ ವಳವೂರು, ಯೋಗೀಶ್ ದರಿಬಾಗಿಲು, ಉಮಾ ಚಂದ್ರಶೇಖರ್ ತುಂಬೆ, ಯಶೋದಾ ಜಾರಂದಗುಡ್ಡೆ, ಮಣಿಮಾಲ ಶೆಟ್ಟಿ ನುಂಗೂರು, ಪ್ರತಿಭಾ ಶೆಟ್ಟಿ ಪಲ್ಲಮಜಲು ಮತ್ತಿತರರು ಇದ್ದರು. ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ದಾಮೋದರ ನೆತ್ತರಕೆರೆ ಸ್ವಾಗತಿಸಿ, ವಂದಿಸಿದರು.
