ಬಂಟ್ವಾಳ : ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಏ.೫ರಿಂದ ೧೦ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಇವರು ಶನಿವಾರ ಸಂಜೆ ಬಿಡುಗಡೆಗೊಳಿಸಿದರು. ಇದೇ ವೇಳೆ ರೂ ೫೦ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ತೀರ್ಥಕೆರೆ ಕಾಮಗಾರಿ ವೀಕ್ಷಿಸಿದರು.13BTL-Badanady

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ, ಪ್ರಧಾನ ಅರ್ಚಕ ಸುಂದರ ಹೊಳ್ಳ, ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಚೌಟ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ, ಹೊರೆಕಾಣಿಕೆ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ನಾಗೇಶ ರಾವ್, ದಿನೇಶ ಸುವರ್ಣ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *