ಬಂಟ್ವಾಳ: ಪುರಸಭಾ ವ್ಯಾಪ್ತಿಯ ಬಿ.ಸಿ.ರೋಡು ಮತ್ತಿತರ ಕಡೆಗಳಲ್ಲಿ ವಾಹನ ನಿಲುಗಡೆ ವ್ಯವಸ್ಥೆಗೆ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ನೇತೃತ್ವದಲ್ಲಿ ಅಧಿಕಾರಿಗಳು ಮಾ.14ರಂದು ಸೋಮವಾರ ಸ್ಥಳ ಪರಿಶೀಲನೆ ನಡೆಸಿದರು.14btl-Purasabhe

ಇಲ್ಲಿನ ಪುರಸಭೆ ವ್ಯಾಪ್ತಿಯ ಬಿ.ಸಿ.ರೋಡಿನಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆ ನಿವಾರಣೆಗೊಳಿಸಲು ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸೋಮವಾರ ಸ್ಥಳ ಪರಿಶೀಲನೆ ನಡೆಸಿ ನಾಲ್ಕು ಕಡೆ ವಾಹನ ನಿಲುಗಡೆಗೆ ಸ್ಥಳ ಗುರುತಿಸಿದೆ.

ಬಿ.ಸಿ.ರೋಡಿನ ಪದ್ಮಾಕಾಂಪ್ಲೆಕ್ಸ್ ಎದುರು, ಮತ್ತು ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನ ಬಳಿ ಸೇರಿದಂತೆ ಕೈಕುಂಜೆ ಭಾರತ್ ಬೀಡಿ ಬ್ರಾಂಚ್ ಬಳಿ ಹಾಗೂ ತಾಲ್ಲೂಕು ಪಂಚಾಯಿತಿ ಹಳೇ ಕಟ್ಟಡ ತೆರವುಗೊಂಡ ಖಾಲಿ ಸ್ಥಳ ಗುರುತಿಸಲಾಗಿದೆ ಎಂದು ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ತಿಳಿಸಿದ್ದಾರೆ. ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಎಂಜಿನಿಯರ್ ಡೊಮಿನಿಕ್ ಡಿಮೆಲ್ಲೋ, ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ವಿವೇಕಾನಂದ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *