ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನೀರಪಳಿಕೆ ಬಾರೆಬೆಟ್ಟು ಎಂಬಲಿ ಮಹಮ್ಮದ್ ಮುಸ್ತಾಫ್ ಎಂಬವರ ಮನೆಯ ಅಂಗಳದಲ್ಲಿ ಒಣ ಹಾಕಿದ ಅಡಿಕೆಯನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುಮಾರು 3500 ಅಡಿಕೆಯನ್ನು ಕಳ್ಳತನ ಮಾಡಿದ ಬಗ್ಗೆ ದೂರು ದಾಖಲಾಗಿರುತ್ತದೆ.

ಪ್ರಕರಣ ದಾಖಲಿಕೊಂಡು ತನಿಖೆ ನಡೆಸಿದಾಗ ಮಂಗಳೂರು ತಾಲೂಕು ಕಣ್ಣೂರು ಗ್ರಾಮದ ಗಾಣದಬೆಟ್ಟು ಎಂಬಲ್ಲಿಯ 4 ಜನ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರು ಈ ಕೃತ್ಯವನ್ನು ಎಸಗಿರುವುದಾಗಿದೆ . ಇವರಿಂದ ಕಳ್ಳತನವಾದ ಸುಮಾರು 3500 ಅಡಿಕೆ ಹಾಗೂ ಪ್ರಕರಣದಲ್ಲಿ ಶಾಮೀಲಾದ 2 ಮೋಟಾರು ಸೈಕಲ್ ಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮಕೈಗೊಳ್ಳಲಾಗಿದೆ.

By suddi9

Leave a Reply

Your email address will not be published. Required fields are marked *