ಬಂಟ್ವಾಳ: ಮಂಗಳೂರು ನಿವಾಸಿ, ಜಿಲ್ಲಾ ಗಾಣಿಗ ಯಾನೆ ಸಪಲಿಗರ ಸೇವಾ ಸಂಘದ ಮಾಜಿ ಅಧ್ಯಕ್ಷ ಎಂ.ವಿಶ್ವನಾಥ್ ( ೯೪) ಇವರು ಅಸೌಖ್ಯದಿಂದ ಮಾ.15ರಂದು ಮಂಗಳವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.
ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ನಿವೃತ್ತ ಆರೋಗ್ಯಾಧಿಕಾರಿಯಾಗಿ, ಅತ್ತಾವರ ಶ್ರೀ ಉಮಾ ಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ರಾಗಿ, ಕರಾವಳಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ, ಸುರತ್ಕಲ್ ಪದ್ಮಾವತಿ ಆಸ್ಪತ್ರೆ ಆಡಳಿತಾಧಿಕಾರಿಯಾಗಿ, ತುಳು ರಂಗಭೂಮಿ ನಟರಾಗಿ, ನಾಟಕ ರಚನೆ ಸಹಿತ ವಿವಿಧ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಬೋಳೂರು ಸ್ಮಶಾನದಲ್ಲಿ ಮಂಗಳವಾರ ಸಂಜೆ ನೆರವೇರಿತು.
