ಬೆಂಗಳೂರು : ‘ತೀರ್ಥಹಳ್ಳಿ’ಯ ವಿದ್ಯಾರ್ಥಿನಿ ನಂದಿತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುವ ಮೂಲಕ ಸರ್ಕಾರ ಹಾಗೂ ಪೊಲೀಸ್ ಇಲಾಖೆ 420 ಕೆಲಸ ಮಾಡುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ.

ನ.4ರಂದು ಮಾಧ್ಯಮಗಳೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಶಾಲೆಗೆ ಹೋಗುವ ಬಾಲಕಿ ಬ್ಯಾಗ್ ನಲ್ಲಿ ಡೆತ್ ನೋಟ್ ಸಿಕ್ಕಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳುತ್ತಿದ್ದಾರೆ. ಈ ಮೂಲಕ ರೇಪ್ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿರುವ ಸರ್ಕಾರ ಹಾಗೂ ಪೊಲೀಸ್ ಇಲಾಖೆ 420 ಕೆಲಸ ಮಾಡುತ್ತಿದೆ. ಪೊಲೀಸ್ ಇಲಾಖೆ ಸಂತ್ರಸ್ತರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Shobha Karandlaje

ರಾಜ್ಯದಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣಗಳು ಬಯಲಿಗೆ ಬರುತ್ತಿದ್ದರೂ ಸರ್ಕಾರ ಹೆಣ್ಣು ಮಕ್ಕಳನ್ನು ರಕ್ಷಿಸುವುದನ್ನು ಬಿಟ್ಟು ಪೋಲಿ ಹುಡುಗರಿಗೆ, ಅತ್ಯಾಚಾರಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ ತೀರ್ಥಹಳ್ಳಿಯಲ್ಲಿ ಮಾತನಾಡಿರುವ ಸಂಸದ ಯಡಿಯೂರಪ್ಪ, ವಿದ್ಯಾರ್ಥಿನಿ ನಂದಿತಾ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಚಿವ ಕಿಮ್ಮನೆ ರತ್ನಾಕರ ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆರೋಪ ಮಾಡಿದ್ದಾರೆ.

ಮೊದಲು ಡೆತ್‌ ನೋಟ್​ ಪ್ರಸ್ತಾಪವೇ ಇರಲಿಲ್ಲ ಆದರೆ, ಇದಕ್ಕಿದ್ದಂತೆ ಡೆತ್ ನೋಟ್ ಸೃಷ್ಟಿಯಾಗಿದೆ. ಪೋಷಕರು ಕೂಡ ಡೆತ್​ನೋಟ್​ ಅನ್ನು ನಿರಾಕರಿಸಿದ್ದಾರೆ. ಒಟ್ಟಿನಲ್ಲಿ ಪ್ರಕರಣದ ತನಿಖೆಯ ಹಾದಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿದರು.

ನನಗೆ ವೈದ್ಯಕೀಯ ವರದಿಯಲ್ಲಿಯೂ ನಂಬಿಕೆ ಇಲ್ಲ. ರಾಜ್ಯದ ಯಾವುದೇ ತನಿಖೆಯಿಂದ ನ್ಯಾಯ ಸಿಗುವುದಿಲ್ಲ. ಹಾಗಾಗಿ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದ್ದಾರೆ..

By suddi9

Leave a Reply

Your email address will not be published. Required fields are marked *