ಉಜಿರೆಯ ನರೇಂದ್ರ ಕುಮಾರ್‌ರಿಗೆ ಯಕ್ಷಗಾನ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ
ಉಜಿರೆ: ಧರ್ಮಸ್ಥಳದಲ್ಲಿರುವ ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ಹವ್ಯಾಸಿ ಯಕ್ಷಗಾನ ಕಲಾವಿದರಾದ ಉಜಿರೆ ನಿವಾಸಿ ಎಸ್.ಬಿ. ನರೇಂದ್ರ ಕುಮಾರ್‌ರಿಗೆ ಎ.01ರಂದು ಶುಕ್ರವಾರ ಕಾರ್ಕಳದಲ್ಲಿ ಭುವನೇಂದ್ರ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಸಚಿವ ವಿ.ಸುನಿಲ್ ಕುಮಾರ್ ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಗೌರವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.