ಬಂಟ್ವಾಳ: ಕೊಯಿಲ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವವು ವಾಮಂಜೂರು ಅನಂತ ಪದ್ಮನಾಭ ಉಪಾಧ್ಯಾಯ ಇವರ ಮಾರ್ಗದರ್ಶನದಲ್ಲಿ ಮಂಗಳವಾರ ನಡೆಯಿತು.

ದೇವರಿಗೆ ನವಕ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಂಜೆ ಭಜನೆ ಸಹಿತ ರಾತ್ರಿ ರಂಗಪೂಜೆ ಮತ್ತು ದೇವರ ಬಲಿ ಉತ್ಸವ ನಡೆಯಿತು. ಆಡಳಿತ ಮೊಕ್ತೇಸರ ಎಂ.ಪದ್ಮರಾಜ ಬಲ್ಲಾಳ್ , ರವಿಶಂಕರ ಶೆಟ್ಟಿ ಬಡಾಜೆಗುತ್ತು, ಅಶ್ವನಿ ಕುಮಾರ್ ರೈ, ಎ.ರಾಮಣ್ಣ ರೈ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *