ಬಂಟ್ವಾಳ : ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಸಂಗಬೆಟ್ಟು ಪಣಂಬೂರು ಶ್ರೀ ವೀರಭದ್ರ ಸ್ವಾಮಿ ಮಹಮ್ಮಾಯಿ ದೇವಸ್ಥಾನದಲ್ಲಿ ದೇವಳದ ಗರ್ಭಗುಡಿ ಪುನರ್ ನಿರ್ಮಾಣಕ್ಕೆ ನಿವೃತ್ತ ಮುಖ್ಯಶಿಕ್ಷಕ ದಾಮೋದರ ರಾವ್ ಗುರುವಾರ ಶಿಲಾನ್ಯಾಸ ನೆರವೇರಿಸಿದರು. ಶಾಸಕ ರಾಜೇಶ ನಾಯ್ಕ್ ಮತ್ತಿತರರು ಇದ್ದಾರೆ.
ಇಲ್ಲಿನ ಸಿದ್ಧಕಟ್ಟೆ ಸಮೀಪದ ಸಂಗಬೆಟ್ಟು ಪಣಂಬೂರು ಶ್ರೀ ವೀರಭದ್ರ ಸ್ವಾಮಿ ಮಾಹಮ್ಮಾಯಿ ದೇವಸ್ಥಾನದಲ್ಲಿ ದೇವಳದ ಗರ್ಭಗುಡಿ ಪುನರ್ ನಿರ್ಮಾಣಕ್ಕೆ ನಿವೃತ್ತ ಮುಖ್ಯಶಿಕ್ಷಕ ದಾಮೋದರ ರಾವ್ ಗುರುವಾರ ಶಿಲಾನ್ಯಾಸ ನೆರವೇರಿಸಿದರು.
ಇಲ್ಲಿನ ಮಹಾ ಗಣಪತಿ ಗುಡಿ ಸೇರಿದಂತೆ ವೀರಭದ್ರ ಸ್ವಾಮಿ, ದುರ್ಗಾಪರಮೇಶ್ವರಿ ಹಾಗೂ ಪರಿವಾರ ದೈವಗಳ ಗರ್ಭಗುಡಿ ಒಟ್ಟು ರೂ ೪ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳಲಿದೆ ಎಂದು ಜೀಣೋದ್ಧಾರ ಸಮಿತಿ ಅಧ್ಯಕ್ಷ ಗಣೇಶ್ ಶೆಟ್ಟಿಗಾರ್ ಬೊಳಂಗಡಿ ತಿಳಿಸಿದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇವಸ್ಥಾನ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಕುಡುಪು ನರಸಿಂಹ ತಂತ್ರಿ ಮತ್ತು ಪ್ರಧಾನ ಆರ್ಚಕ ಪ್ರಭಾಕರ ಐಗಳ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನ ನೆರವೇರಿತು.
ಪೂಂಜ ಕ್ಷೇತ್ರದ ಕೃಷ್ಣಪ್ರಸಾದ ಅಸ್ರಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಪೂಜಾರಿ ಅಳಕೆ, ಜಿಲ್ಲಾ ಪದ್ಮಶಾಲಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಓಂಪ್ರಕಾಶ್ ಡಿ. ಶೆಟ್ಟಿಗಾರ್, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕೆ. ಮೋಹನ್ ಶೆಟ್ಟಿಗಾರ್, ಆಡಳಿತ ಮಂಡಳಿ ಗುರಿಕಾರರಾದ ಚಂದ್ರಹಾಸ ಶೆಟ್ಟಿಗಾರ್ ಸಿದ್ಧಕಟ್ಟೆ, ಪಿ. ಶ್ರೀನಿವಾಸ ಶೆಟ್ಟಿಗಾರ್ ಕಾಟಿಪಳ್ಳ, ಗಂಗಾಧರ ಶೆಟ್ಟಿಗಾರ್ ಬೆಳ್ಮ, ಮಹಾಬಲ ಶೆಟ್ಟಿಗಾರ್ ಹೊಕ್ಕಾಡಿಗೋಳಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ತುAಗಪ್ಪ ಬಂಗೇರ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೇಬಿ ಕುಂದರ್, ಪೂಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಕುಮಾರ್ ಚೌಟ, ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಪ್ರಗತಿಪರ ಕೃಷಿಕ ಬಿ.ಪ್ರಪುಲ್ಲ ರೈ, ಸಿದ್ಧಕಟ್ಟೆ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಗೋಪಾಲ ಬಂಗೇರ, ಗಾಡಿಪಲ್ಕೆ ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಸುರೇಶ್ ಕುಲಾಲ್, ಕೋರ್ಯಾರು ಕ್ಷೇತ್ರದ ಗುರಿಕಾರ ಗೋಪಾಲ ಗೌಡ, ಡಾ.ಸುದೀಪ್ ಕುಮಾರ್ ಜೈನ್, ಅಚ್ಯುತ ಆಚಾರ್ಯ ಸಿದ್ಧಕಟ್ಟೆ, ಲೋಕಯ ಗಾಡಿಪಲ್ಕೆ ಮತ್ತಿತರರು ಇದ್ದರು.
