ಸುರತ್ಕಲ್: ಲಾರಿಯ ಅಡಿಭಾಗದಲ್ಲಿ ಮಲಗಿದ್ದ ಭಿಕ್ಷುಕನನ್ನು ಗಮನಿಸದೇ ಚಾಲಕ ನಿರ್ಲಕ್ಷ್ಯತನದಿಂದ ಲಾರಿಯನ್ನು ಮುಂದಕ್ಕೆ ಚಲಾಯಿಸಿದ ಪರಿಣಾಮ ಆತ ಗಂಭೀರ ಗಾಯಗೊಂಡ ಘಟನೆ ಇಲ್ಲಿಗೆ ಸಮೀಪದ ಕುಳಾಯಿ-ಹೊನ್ನಕಟ್ಟೆ ಎಂಬಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಗಾಯಾಳು ಭಿಕ್ಷುಕನನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಚಾಲಕನನ್ನು ಸುರತ್ಕಲ್ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

