ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಶನಿವಾರ ಸಂಜೆ ಭೇಟಿ ನೀಡಿದರು.9btl-Rai

ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಶನಿವಾರ ಸಂಜೆ ಭೇಟಿ ನೀಡಿದರು. ಕ್ಷೇತ್ರದ ತಂತ್ರಿ ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯ ಇವರ ಮಾರ್ಗದರ್ಶನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ವಿವಿಧ ವೈದಿಕ ಮತ್ತು ಧಾರ್ಮಿಕ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು.

ಇದೇ ವೇಳೆ ಅನುವಂಶಿಕ ಮೊಕ್ತೇಸರ ಕೆ.ಸುಂದರ ಹೊಳ್ಳ ಅವರು ಕ್ಷೇತ್ರದ ಹಿನ್ನೆಲೆ ಬಗ್ಗೆ ವಿವರಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ, ಗೌರವಾಧ್ಯಕ್ಷ ರಾಜಾ ಎಸ್.ಹೊಳ್ಳ ಪತ್ತುಮುಡಿ, ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಚೌಟ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ, ಮಾಜಿ ಅಧ್ಯಕ್ಷ ಪ್ರಕಾಶ ಜೈನ್ ಬೊಳ್ಳೋಡಿ, ಹೊರೆಕಾಣಿಕೆ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪ್ರಮುಖರಾದ ಜಗದೀಶ ಕೊಯಿಲ, ಸಂದೇಶ ಶೆಟ್ಟಿ ಪೊಡುಂಬ, ದಿನೇಶ ಸುವರ್ಣ, ದಾಮೋದರ ಮಡಿವಾಳ, ಚಂದ್ರಶೇಖರ ಆಚಾರ್ಯ, ದೇವಪ್ಪ ಕುಲಾಲ್, ರಾಮಚಂದ್ರ ಶೆಟ್ಟಿಗಾರ್ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *