ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಎ.10ರಂದು ಭಾನುವಾರ ಸಮಾಪನಗೊಂಡ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ತಂತ್ರಿ ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯ, ಅನುವಂಶಿಕ ಪ್ರಧಾನ ಅರ್ಚಕ ಕೆ.ಸುಂದರ ಹೊಳ್ಳ, ಬ್ರಹ್ಮಕಲಶ ಸಮಿತಿ ಗೌರವಾಧ್ಯಕ್ಷ ರಾಜಾ ಎಸ್.ಹೊಳ್ಳ ಪತ್ತುಮುಡಿ ಇವರನ್ನು ಸನ್ಮಾನಿಸಲಾಯಿತು.
ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದುರ್ಗಾದಾಸ ಶೆಟ್ಟಿ ಕರೆಂಕಿಜೆ, ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಚೌಟ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಮತ್ತಿತರರು ಇದ್ದರು.
