ಬಂಟ್ವಾಳ: ತಾಲ್ಲೂಕಿನ ನಾವೂರು ಗ್ರಾಮದ ಕೂಡಿಬೈಲು ಗದ್ದೆಯಲ್ಲಿ ಎ.17ರಂದು ಭಾನುವಾರ ನಡೆಯುವ ‘ಮೂಡೂರು-ಪಡೂರು’ ಜೋಡುಕರೆ ಬಯಲು ಕಂಬಳಕ್ಕೆ ಕರೆ ಮುಹೂರ್ತ ಈಚೆಗೆ ನೆರವೇರಿತು.
ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ, ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್, ಪ್ರಮುಖರಾದ ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ ಶೆಟ್ಟಿ, ಅವಿಲ್ ಮಿನೇಜಸ್, ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಉಮೇಶ ಕುಲಾಲ್, ಪುರುಷೋತ್ತಮ ಬಂಗೇರ, ಲೋಲಾಕ್ಷ ಶೆಟ್ಟಿ, ಕೆ.ಮಾಯಿಲಪ್ಪ ಸಾಲ್ಯಾನ್, ಪ್ರವೀಣ ಕಿಣಿ, ವಾಸು ಪೂಜಾರಿ, ಸುಜಿತ್ ಜೈನ್, ವೆಂಕಪ್ಪ ಪೂಜಾರಿ ಮತ್ತಿತರರು ಇದ್ದರು.
