ಬೆಂಗಳೂರು: ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಹೈಗ್ರೌಂಡ್ಸ್ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಏಪ್ರಿಲ್ 14 ರಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಒಟ್ಟು 36 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
