Published On: Wed, Apr 20th, 2022

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣ/ ಹೊಸ ಸದಸ್ಯತ್ವಕ್ಕೆ ಅರ್ಜಿ ಏಪ್ರಿಲ್ 25 ಕೊನೆಯ ದಿನ.

ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ), ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣಕ್ಕೆ ಮತ್ತು ಹೊಸ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಲು ಏಪ್ರಿಲ್ 25ರಂದು ಸೋಮವಾರ ಕೊನೆಯ ದಿನವಾಗಿರುತ್ತದೆ.

ಸದಸ್ಯರು ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ 2 ಭಾವಚಿತ್ರಗಳೊಂದಿಗೆ 500ರೂ. ಸದಸ್ಯತ್ವ ಶುಲ್ಕವನ್ನು ಮತ್ತು 10 ರೂ. ಅರ್ಜಿ ಶುಲ್ಕವನ್ನು ಸಂಘದ ಕಚೇರಿ (ಮಂಗಳೂರು ಪ್ರೆಸ್ ಕ್ಲಬ್)ಯಲ್ಲಿ ಪಾವತಿಸಿ ಸದಸ್ಯತ್ವ ನವೀಕರಿಸಬಹುದಾಗಿದೆ.

ಏಪ್ರಿಲ್ 25 ಸೋಮವಾರ ಸಂಜೆ 4 ಗಂಟೆಯ ಬಳಿಕ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸಂಘದ ಸದಸ್ಯರಾಗಿರುವ ತಾಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಜಿಲ್ಲಾ ಸಂಘದ ಅಧೀನದಲ್ಲಿರುವ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮೂಲಕವೇ ಸದಸ್ಯತ್ವ ನವೀಕರಣಕ್ಕೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ. ಅರ್ಜಿಯಲ್ಲಿ ಸೂಚಕರ ಮತ್ತು ಅನುಮೋದಕರ ಸಹಿ ಮತ್ತು ವಿಳಾಸ ಕಡ್ಡಾಯ. ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ನಿಗದಿತ ನಮೂನೆಯ ಅರ್ಜಿ ಫಾರಂಗಳು ಸಂಘದ ಕಚೇರಿಯಲ್ಲಿ ಲಭ್ಯವಿರುತ್ತದೆ. ಹೆಚ್ಚಿನ ವಿವರಗಳಿಗೆ ಸಂಘದ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter